ಶ್ರೀನಗರ: ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರ ಹೊಡೆದುರುಳಿಸುವಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ಯಶಸ್ವಿಯಾಗಿದ್ದಾರೆ. ಜಮ್ಮು-ಕಾಶ್ಮೀರದ ಬುಡ್ಗಾಮ್ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಉಗ್ರರು ಈ ಪ್ರದೇಶದಲ್ಲಿರುವ ಮಾಹಿತಿ ಪಡೆದುಕೊಂಡು ಸ್ಥಳೀಯ ಪೊಲೀಸರು ಹಾಗೂ ಭದ್ರತಾ ಪಡೆ ಕಾರ್ಯ ನಡೆಸಿವೆ ಎಂದು ಜಮ್ಮು-ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ಜಮ್ಮು-ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಅವರನ್ನ ಸದೆಬಡೆಯುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ.