ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಇಂದು ಬೆಳಗ್ಗೆ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಕಾರ್ಯಾಚರಣೆ ಆರಂಭಿಸಿತ್ತು. ಉಗ್ರರು ಇರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಅನಂತ್‌ನಾಗ್ ಜಿಲ್ಲೆಯ ಶ್ರೀಗುಫ್ವಾರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ಬೆಳಗ್ಗೆ 6.40 ರ ಸುಮಾರಿಗೆ ಅಡಗಿ ಕೂತಿರುವ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಹೀಗಾಗಿ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು.
ಭಾನುವಾರ ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್‌ನ ಗುಲ್ಶನ್ ಅಬಾದ್ ರೆಬನ್ ಗ್ರಾಮದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರು ಮೃತಪಟ್ಟಿದ್ದರು.