ಶ್ರೀನಗರ : ಅನಂತ್ನಾಗ್ನ ವಾಘಮಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರು ಮುಖಾಮಖಿಯಾಗಿದ್ದು, ಎನ್ಕೌಂಟರ್ ಕಾರ್ಯಾಚರಣೆ ನಡೆಯುತ್ತಿದ್ದು ಇಬ್ಬರು ಅಪರಿಚಿತ ಉಗ್ರರರನ್ನ ಕೊಂದು ಹಾಕಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಜೂನ್ 29 ರಂದು ಅನಂತ್ನಾಗ್ ಜಿಲ್ಲೆಯಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಕಮಾಂಡರ್ ಮಸೂದ್ ಸೇರಿದಂತೆ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.
-
#Encounter has started at #Waghama area of #Anantnag. JKP and security forces are on the job. Further details shall follow. @JmuKmrPolice
— Kashmir Zone Police (@KashmirPolice) June 30, 2020 " class="align-text-top noRightClick twitterSection" data="
">#Encounter has started at #Waghama area of #Anantnag. JKP and security forces are on the job. Further details shall follow. @JmuKmrPolice
— Kashmir Zone Police (@KashmirPolice) June 30, 2020#Encounter has started at #Waghama area of #Anantnag. JKP and security forces are on the job. Further details shall follow. @JmuKmrPolice
— Kashmir Zone Police (@KashmirPolice) June 30, 2020
ಜೂನ್ 26 ರಂದು ಟ್ರಾಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದರು. ಚೆವಾ ಉಲ್ಲಾರ್ ಗ್ರಾಮದಲ್ಲಿ ಅಪರಿಚಿತ ಭಯೋತ್ಪಾದಕರು ಇರುವ ಬಗ್ಗೆ ಪೊಲೀಸರಿಂದ ಮಾಹಿತಿ ಪಡೆದ ಭದ್ರತಾ ಪಡೆಗಳು ದಾಳಿ ನಡೆಸಿದ್ದವು. ಪುಲ್ವಾಮಾ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ಕೌಂಟರ್ನಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಕೊಂದು ಹಾಕಿದ್ದವು.
ಜೂನ್ ತಿಂಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನಡೆದ 12 ಗುಂಡಿನ ಚಕಮಕಿಯಲ್ಲಿ ಒಟ್ಟು 33 ಉಗ್ರರು ಹತರಾಗಿದ್ದಾರೆ.