ಶ್ರೀನಗರ(ಜಮ್ಮು ಕಾಶ್ಮೀರ): ಕಣಿವೆನಾಡಿನ ಪುಲ್ವಾಮಾ ಜಿಲ್ಲೆಯಲ್ಲಿ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.
ಪ್ಯಾಂಪೋರಿ ಬಳಿಯ ಮೀಜ್ ಎಂಬಲ್ಲಿ ಬೆಳಗ್ಗೆಯಿಂದ ನಿಖರ ಮಾಹಿತಿಯ ಆಧಾರದ ಮೇಲೆ ಭಯೋತ್ಪಾದಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕರಿಗೆ ಶೋಧ ಕಾರ್ಯ ನಡೆಸುವ ವೇಳೆ ಗುಂಡಿನ ಚಕಮಕಿ ನಡೆದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 1ರಿಂದ ಜೂನ್ 10ರವರೆಗೆ ಸುಮಾರು 68 ಭಯೋತ್ಪಾದಕರನ್ನು ಜಮ್ಮು ಕಾಶ್ಮೀರದಲ್ಲಿ ಹತ್ಯೆ ಮಾಡಲಾಗಿದೆ.
ಹತ್ಯೆಯಾದ ಭಯೋತ್ಪಾದಕರಲ್ಲಿ ಹಿಜ್ಬುಲ್ ಮುಜಾಹಿದ್ದೀನ್ಗೆ ಸೇರಿದ ಸ್ಥಳೀಯ ಭಯೋತ್ಪಾಕರೇ ಹೆಚ್ಚಾಗಿದ್ದಾರೆ. ಸುಮಾರು 35 ಹಿಜ್ಬುಲ್ ಉಗ್ರರನ್ನು ಸೇನೆ ಹೊಡೆದುರುಳಿಸಿದೆ.