ಶ್ರೀನಗರ (ಕಾಶ್ಮೀರ): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಗೂಸು ಪ್ರದೇಶದಲ್ಲಿ ಎನ್‌ಕೌಂಟರ್ ಆರಂಭವಾಗಿದ್ದು, ಉಗ್ರರ ಗುಂಡಿನ ದಾಳಿಗೆ ಯೋಧ ಹುತಾತ್ಮರಾಗಿದ್ದಾರೆ. ಸದ್ಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದ್ದು ಓರ್ವ ಉಗ್ರನನ್ನು ಹೊಡೆದುರುಳಿಸಿದೆ.
ಪೊಲೀಸರು ಮತ್ತು ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿವೆ. ಉಗ್ರರು ಇರುವ ಖಚಿತ ಸುಳಿವಿನ ಮೇಲೆ ಭದ್ರತಾಪಡೆಗಳು ಈಗಾಗಲೇ ಕಾರ್ಯಾಚರಣೆ ಕೈಗೊಂಡಿವೆ ಎಂದು ಕಾಶ್ಮೀರ ವಲಯದ ಪೊಲೀಸರು ತಿಳಿಸಿದ್ದಾರೆ.
ಇದಕ್ಕೂ ಮೊದಲು ಜುಲೈ 4ರಂದು ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಕೊಂದು ಹಾಕಲಾಗಿತ್ತು. ಕುಲ್ಗಾಂನ ಅರ್ರಾ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಭದ್ರತಾ ಪಡೆಗಳಿಗೆ ಮಾಹಿತಿ ಬಂದ ನಂತರ ಎನ್‌ಕೌಂಟರ್ ಪ್ರಾರಂಭವಾಗಿತ್ತು.