ಕಾನ್ಪುರ (ಉತ್ತರ ಪ್ರದೇಶ): ವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾದ ಭಾರತೀಯ ಜನತಾ ಪಕ್ಷದ ಸಂಸದ ಸಾಕ್ಷಿ ಮಹಾರಾಜ್ ಈಗ "ಪಾಕಿಸ್ತಾನಕ್ಕಿಂತ ಭಾರತದಲ್ಲಿ ಹೆಚ್ಚು ಮುಸ್ಲಿಮರು ಇರುವುದರಿಂದ ಅವರ ಅಲ್ಪಸಂಖ್ಯಾತ ಸ್ಥಾನಮಾನವನ್ನು ರದ್ದುಗೊಳಿಸಬೇಕು" ಎಂದು ಹೇಳಿದ್ದಾರೆ.
"ಪಾಕಿಸ್ತಾನಕ್ಕಿಂತ ಭಾರತದಲ್ಲಿ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ. ಆದ್ದರಿಂದ ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನವನ್ನು ತಕ್ಷಣದಿಂದಲೇ ರದ್ದುಗೊಳಿಸಬೇಕು. ಮುಸ್ಲಿಮರು ಈಗ ತಮ್ಮನ್ನು ಹಿಂದೂಗಳ ಕಿರಿಯ ಸಹೋದರರೆಂದು ಪರಿಗಣಿಸಿ ಅವರೊಂದಿಗೆ ದೇಶದಲ್ಲಿ ವಾಸಿಸಬೇಕು" ಎಂದು ಅವರು ಹೇಳಿದರು.
ದೇಶದ ಹೆಚ್ಚುತ್ತಿರುವ ಜನಸಂಖ್ಯೆಯ ಕುರಿತು ಮಾತನಾಡಿದ ಸಾಕ್ಷಿ, "ಹೆಚ್ಚುತ್ತಿರುವ ಜನಸಂಖ್ಯೆಯನ್ನು ಪರಿಶೀಲಿಸಲು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗುವುದು. ಈ ಮೂಲಕ ಎರಡಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದಿರುವವರು ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ ವಂಚಿತರಾಗುತ್ತಾರೆ" ಎಂದು ಹೇಳಿದರು.
ಓದಿ: ಸಿಂಘು ಗಡಿಯಲ್ಲಲ್ಲ.. ಡಿ. 25ಕ್ಕೆ ಯುಪಿ ರೈತರೊಂದಿಗೆ ಪ್ರಧಾನಿ ಮೋದಿ ಸಂವಾದ