ಪಂಜಾಬ್: ಕೊರೊನಾ ವೈರಸ್ ಪ್ರಕರಣಗಳು ಪಂಜಾಬ್‌ನಲ್ಲಿಯೂ ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ಈಗಾಗಲೇ ಲಾಕ್‌ಡೌನ್ ಅನ್ನು ಏಪ್ರಿಲ್ 30 ರ ವರೆಗೆ ವಿಸ್ತರಿಸಿದೆ. ಜೊತೆಗೆ ಇವತ್ತು ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಪ್ರಧಾನಿ ಜೊತೆಗಿನ ಸಂವಾದದಲ್ಲೂ ಲಾಕ್‌ಡೌನ್ ವಿಸ್ತರಣೆ ಮಾಡಬೇಕು ಎಂದು ಮನವಿ ಮಾಡಿದ್ದರು.
ಈ ಬೆಳವಣಿಗೆಗಳ ಬೆನ್ನಲ್ಲೇ ವಿಶ್ವಪ್ರಸಿದ್ಧ ಸ್ವರ್ಣ ಮಂದಿರಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ನಿಯಮ ಇಂದು ಬೆಳಿಗ್ಗೆಯಿಂದಲೇ ಜಾರಿಗೆ ಬಂದಿದೆ.
ರಾಜ್ಯದಲ್ಲಿ ಈವರೆಗೆ 151 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, 11 ಜನ ಸಾವನ್ನಪ್ಪಿದ್ದಾರೆ.