ನವದೆಹಲಿ: ಈ ವರ್ಷ ಭಾರತದ ಆರ್ಥಿಕತೆಯು ಶೇ. 10.3 ರಷ್ಟು ಕುಸಿಯಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಅಂದಾಜಿಸಿದ್ದು, ಇದು ಬಿಜೆಪಿ ಸರ್ಕಾರದ ಮತ್ತೊಂದು 'ಘನ ಸಾಧನೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ.
ಐಎಂಎಫ್ ಬಿಡುಗಡೆ ಮಾಡಿರುವ ಬಾಂಗ್ಲಾದೇಶ, ಮ್ಯಾನ್ಮಾರ್, ನೇಪಾಳ, ಚೀನಾ, ಭೂತಾನ್, ಪಾಕಿಸ್ತಾನ, ಶ್ರೀಲಂಕಾ, ಅಫ್ಘಾನಿಸ್ತಾನ ಮತ್ತು ಭಾರತದ 2020-21ರ ಆರ್ಥಿಕ ಬೆಳವಣಿಗೆಯನ್ನು ತೋರಿಸುವ ಚಾರ್ಟ್ ಅನ್ನು ಟ್ಯಾಗ್ ಮಾಡಿ ರಾಗಾ ಟ್ವೀಟ್ ಮಾಡಿದ್ದಾರೆ. ಈ ವರ್ಷ ಭಾರತದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಭಾರಿ ಪ್ರಮಾಣದಲ್ಲಿ ಅಂದರೆ ಶೇ.10.3 ರಷ್ಟು ಸಂಕುಚಿತಗೊಳ್ಳುವ ಸಾಧ್ಯತೆಯಿದೆ ಎಂಬುದನ್ನು ಈ ಚಾರ್ಟ್ ತೋರಿಸುತ್ತದೆ.
-
Another solid achievement by the BJP government.
— Rahul Gandhi (@RahulGandhi) October 16, 2020 " class="align-text-top noRightClick twitterSection" data="
Even Pakistan and Afghanistan handled Covid better than India. pic.twitter.com/C2kILrvWUG
">Another solid achievement by the BJP government.
— Rahul Gandhi (@RahulGandhi) October 16, 2020
Even Pakistan and Afghanistan handled Covid better than India. pic.twitter.com/C2kILrvWUGAnother solid achievement by the BJP government.
— Rahul Gandhi (@RahulGandhi) October 16, 2020
Even Pakistan and Afghanistan handled Covid better than India. pic.twitter.com/C2kILrvWUG
"ಇದು ಬಿಜೆಪಿ ಸರ್ಕಾರದ ಮತ್ತೊಂದು ಘನ ಸಾಧನೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವೇ ಕೊರೊನಾ ಪರಿಸ್ಥಿತಿಯನ್ನು ಭಾರತಕ್ಕಿಂತ ಉತ್ತಮವಾಗಿ ನಿಭಾಯಿಸಿದೆ" ಎಂದು ಗಾಂಧಿ ಚಾರ್ಟ್ ನೊಂದಿಗೆ ಟ್ವೀಟ್ ಮಾಡಿದ್ದಾರೆ.
ಐಎಂಎಫ್ ತನ್ನ ಇತ್ತೀಚಿನ 'ವಿಶ್ವ ಆರ್ಥಿಕ ದೃಷ್ಟಿಕೋನ' ವರದಿಯಲ್ಲಿ ಕೋವಿಡ್ ಬಿಕ್ಕಟ್ಟಿನಿಂದಾಗಿ ಭಾರತದ ಆರ್ಥಿಕತೆಗೆ ಸಾಕಷ್ಟು ಹೊಡೆತ ಬಿದ್ದಿದ್ದು, ಪರಿಣಾಮ ಭಾರಿ ಪ್ರಮಾಣದಲ್ಲಿ ಜಿಡಿಪಿ ಕುಸಿಯುವ ಸಾಧ್ಯತೆಯಿದೆ. 2021ರಲ್ಲಿ ಶೇ 8.8ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದೂ ಹೇಳಿತ್ತು.