ಹೈದರಾಬಾದ್ (ತೆಲಂಗಾಣ): ಹೈದರಾಬಾದ್‌ನ ನಾಲ್ಕು ವಲಯಗಳನ್ನು ಹೊರತುಪಡಿಸಿ ರಾಜ್ಯದಲ್ಲಿ ಯಾವುದೇ ಕೊರೊನಾ ಸಕ್ರಿಯ ಪ್ರಕರಣಗಳಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಸ್ಪಷ್ಟಪಡಿಸಿದ್ದಾರೆ.
ಹೈದರಾಬಾದ್ ನಗರದ ನಾಲ್ಕು ವಲಯಗಳಾದ ಎಲ್ಬಿ ನಗರ, ಮಲಕ್ಪೇಟ್, ಚಾರ್ ಮಿನಾರ್, ಕಾರ್ವಾನ್ ವಲಯಗಳಲ್ಲಿ ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿವೆ. ಈ ಪ್ರದೇಶಗಳಲ್ಲಿ ಸುಮಾರು 1,442 ಕುಟುಂಬಗಳಿವೆ ಎಂದು ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಲಾಕ್ಡೌನ್ ಮುಂದುವರಿಯುತ್ತದೆ. ಕೇಂದ್ರವು ಘೋಷಿಸಿರುವ ಲಾಕ್ಡೌನ್ ಮುಗಿದ ನಂತರ ಮೇ 17ರಂದು ಕೇಂದ್ರ ನೀಡುವ ಮಾರ್ಗಸೂಚಿಗಳ ಆಧಾರದ ಮೇಲೆ ಮುಂದಿನ ಕಾರ್ಯತಂತ್ರವನ್ನು ಅಂತಿಮಗೊಳಿಸಲಾಗುವುದು ಎಂದು ಕೆಸಿಆರ್ ಹೇಳಿದ್ದಾರೆ.
ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಪ್ರಯತ್ನಗಳು ಮುಂದುವರೆಯುತ್ತವೆ. ಈ ನಡುವೆ ಮಳೆಗಾಲದಲ್ಲಿ ಕಾಣಿಸಿಕೊಳ್ಳಬಹುದಾದ ಕಾಯಿಲೆಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.