ಮುಂಬೈ: ಇಂದು ಬೆಳ್ಳಂಬೆಳಗ್ಗೆ ಮಹಾರಾಷ್ಟ್ರದ ಧುಲೆ ಜಿಲ್ಲೆಯ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಸುಮಾರು 15 ಜನ ಸಾವನ್ನಪ್ಪಿದ್ದಾರೆ.
ಇಲ್ಲಿನ ಶಿರ್ಪುರ ತಾಲೂಕಿನ ವಾಘಡಿ ಗ್ರಾಮದಲ್ಲಿರುವ ಫ್ಯಾಕ್ಟರಿಯಲ್ಲಿ ಸ್ಪೋಟ ಸಂಭವಿಸಿದ ವೇಳೆ 100 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹಲವು ಸಿಲಿಂಡರ್ಗಳು ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಇಲ್ಲಿಯವರೆಗೆ 15 ಮಂದಿ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ ಶಿರ್ಪುರ ಪೊಲೀಸ್ ಠಾಣೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.