ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ-ಹರಿಯಾಣದ ಸಿಂಗು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ 45ನೇ ದಿನಕ್ಕೆ ಕಾಲಿಟ್ಟಿದ್ದು, ರೈತ ಸಂಘಟನೆ ಹಾಗೂ ಕೇಂದ್ರ ಸರ್ಕಾರದ ನಡುವೆ ನಡೆಯುತ್ತಿರುವ ಮಾತುಕತೆಗಳು ಸಹ ವಿಫಲಗೊಳ್ಳುತ್ತಿವೆ.
ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಕೆಲ ರೈತರು ಈಗಾಗಲೇ ಆತ್ಮಹತ್ಯೆಗೆ ಶರಣಾಗಿದ್ದು, ಇದರ ಬೆನ್ನಲ್ಲೇ ಇಂದು ಮತ್ತೋರ್ವ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 40 ವರ್ಷದ ರೈತ ಅಮಿರೇಂದ್ರ ಸಿಂಗ್ ಆತ್ಮಹತ್ಯೆ ಮಾಡಿಕೊಂಡವರು ಎನ್ನಲಾಗಿದೆ.
ಓದಿ: ಭೂ ಹಂಚಿಕೆ ಪ್ರಕರಣ: ಇಡಿ ವಿಶೇಷ ನ್ಯಾಯಾಲಯದಿಂದ ಆಂಧ್ರ ಸಿಎಂಗೆ ನೋಟಿಸ್!
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅವರು ಏಕಾಏಕಿ ವಿಷ ಸೇವನೆ ಮಾಡಿದ್ದಾರೆ. ಅವರನ್ನು ಸೋನಿಪತ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹರಿಯಾಣ ಪೊಲೀಸರು ಮಾಹಿತಿ ನೀಡಿದ್ದು, ತನಿಖೆಗೆ ಆದೇಶ ನೀಡಲಾಗಿದೆ.
ಹರಿಯಾಣ ಹಾಗೂ ಪಂಜಾಬ್ನ ನೂರಾರು ರೈತರು ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸುತ್ತಿದ್ದಾರೆ.