ಮಲಪ್ಪುರಂ(ಕೇರಳ): ಪಾಪಿ ತಂದೆಯೋರ್ವ ತನ್ನ ನಾಲ್ವರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ.
17,15,13 ಹಾಗೂ 10 ವರ್ಷದ ಹೆಣ್ಣು ಮಕ್ಕಳ ಮೇಲೆ ಕಳೆದ ಕೆಲ ತಿಂಗಳಿಂದ ನಿರಂತರವಾಗಿ ತಂದೆ ಈ ಕೃತ್ಯವೆಸಗಿದ್ದಾನೆ. 10 ವರ್ಷದ ಬಾಲಕಿ ಘಟನೆಗೆ ಸಂಬಂಧಿಸಿದಂತೆ ಶಾಲೆಯಲ್ಲಿ ಶಿಕ್ಷಕಿ ಮುಂದೆ ಹೇಳಿಕೊಂಡಾಗ ಈ ಪ್ರಕರಣ ಬೆಳಕಿಗೆ ಬಂದಿದೆ.
ಶಾಲೆಯ ಆಡಳಿತ ಮಂಡಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ 47 ವರ್ಷದ ವ್ಯಕ್ತಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ. ಇನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹ ಪ್ರಕರಣದ ವಿಚಾರಣೆ ನಡೆಸಲು ಮುಂದಾಗಿದೆ.