ETV Bharat / bharat

ಗಡಿ ಸಮಸ್ಯೆ ಕುರಿತು ಭಾರತ-ಚೀನಾ ಬ್ರಿಗೇಡ್​​ ಕಮಾಂಡರ್‌ ಮಟ್ಟದ ಮಾತುಕತೆ - ಬ್ರಿಗೇಡ್ ಕಮಾಂಡರ್ ಮಟ್ಟದ ಚರ್ಚೆ

ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಣೆ ಗುರುವಾರ-ಶುಕ್ರವಾರ ಲಡಾಖ್‌ಗೆ ಭೇಟಿ ನೀಡಿದ್ದು, ಭಾರತದ ಭದ್ರತಾ ಸನ್ನದ್ಧತೆಯ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದರು. ಸಂಭವಿಸಬಹುದಾದ ಸಮಸ್ಯೆ ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Field commanders of Indian, Chinese armies hold interaction in eastern Ladakh
ಭಾರತೀಯ-ಚೀನೀ ಸೇನೆಗಳ ಕ್ಷೇತ್ರ ಕಮಾಂಡರ್‌ಗಳ ಚರ್ಚೆ: ಗಡಿ ರಕ್ಷಣೆಗೆ ಸೂಕ್ತ ಕ್ರಮ
author img

By

Published : Sep 5, 2020, 7:39 AM IST

ನವದೆಹಲಿ: ಭಾರತ-ಚೀನಾ ಗಡಿ ಸಂಘರ್ಷ ಮುಂದುವರೆದಿದ್ದು, ನಿನ್ನೆ ಪೂರ್ವ ಲಡಾಖ್‌ನಲ್ಲಿ ಮತ್ತೊಂದು ಸುತ್ತಿನ ಬ್ರಿಗೇಡ್ ಕಮಾಂಡರ್ ಮಟ್ಟದ ಮಾತುಕತೆ ನಡೆಸಲಾಗಿದೆ.

ಚುಶುಲ್‌ನ ಗಡಿ ಭಾಗದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಸಂವಾದ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ವಾರ ಮೂರು ಸುತ್ತುಗಳ ಬ್ರಿಗೇಡ್ ಕಮಾಂಡರ್ ಮಟ್ಟದ ಮಾತುಕತೆ ನಡೆದಿದೆ. ಕಳೆದ ಕೆಲವು ದಿನಗಳಲ್ಲಿ ರಕ್ಷಣೆಯ ದೃಷ್ಟಿಯಿಂದ ಚುಶುಲ್ ಮತ್ತು ಇತರೆ ಹಲವಾರು ಪ್ರದೇಶಗಳಲ್ಲಿ ಉಭಯ ದೇಶಗಳು ಸೈನ್ಯದ ನಿಯೋಜನೆಯನ್ನು ಗಮನಾರ್ಹವಾಗಿ ಹೆಚ್ಚಿಸಿವೆ.

ಐದು ದಿನಗಳ ಹಿಂದೆ ದಕ್ಷಿಣದ ಪ್ಯಾಂಗೊಂಗ್ ಸರೋವರದ ಭಾರತದ ಭೂಪ್ರದೇಶವನ್ನು ಚೀನಾ ಆಕ್ರಮಿಸಲು ಪ್ರಯತ್ನಿಸಿದ ನಂತರ ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ಹಿನ್ನೆಲೆ ಉಭಯ ರಾಷ್ಟ್ರಗಳು ಅಧಿಕಾರಿಗಳು ಗಡಿ ಸಮಸ್ಯೆಯನ್ನು ಪರಿಹರಿಸಲು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳಲ್ಲಿ ತೊಡಗಿದ್ದರು. ಭಾರತ ಸೈನ್ಯ ಕೂಡ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.

ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಣೆ ಗುರುವಾರ-ಶುಕ್ರವಾರ ಲಡಾಖ್‌ಗೆ ಭೇಟಿ ನೀಡಿದ್ದು, ಭಾರತದ ಭದ್ರತಾ ಸನ್ನದ್ಧತೆಯ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದರು. ಸಂಭವಿಸಬಹುದಾದ ಸಮಸ್ಯೆ ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ನವದೆಹಲಿ: ಭಾರತ-ಚೀನಾ ಗಡಿ ಸಂಘರ್ಷ ಮುಂದುವರೆದಿದ್ದು, ನಿನ್ನೆ ಪೂರ್ವ ಲಡಾಖ್‌ನಲ್ಲಿ ಮತ್ತೊಂದು ಸುತ್ತಿನ ಬ್ರಿಗೇಡ್ ಕಮಾಂಡರ್ ಮಟ್ಟದ ಮಾತುಕತೆ ನಡೆಸಲಾಗಿದೆ.

ಚುಶುಲ್‌ನ ಗಡಿ ಭಾಗದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಸಂವಾದ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಈ ವಾರ ಮೂರು ಸುತ್ತುಗಳ ಬ್ರಿಗೇಡ್ ಕಮಾಂಡರ್ ಮಟ್ಟದ ಮಾತುಕತೆ ನಡೆದಿದೆ. ಕಳೆದ ಕೆಲವು ದಿನಗಳಲ್ಲಿ ರಕ್ಷಣೆಯ ದೃಷ್ಟಿಯಿಂದ ಚುಶುಲ್ ಮತ್ತು ಇತರೆ ಹಲವಾರು ಪ್ರದೇಶಗಳಲ್ಲಿ ಉಭಯ ದೇಶಗಳು ಸೈನ್ಯದ ನಿಯೋಜನೆಯನ್ನು ಗಮನಾರ್ಹವಾಗಿ ಹೆಚ್ಚಿಸಿವೆ.

ಐದು ದಿನಗಳ ಹಿಂದೆ ದಕ್ಷಿಣದ ಪ್ಯಾಂಗೊಂಗ್ ಸರೋವರದ ಭಾರತದ ಭೂಪ್ರದೇಶವನ್ನು ಚೀನಾ ಆಕ್ರಮಿಸಲು ಪ್ರಯತ್ನಿಸಿದ ನಂತರ ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾದ ಹಿನ್ನೆಲೆ ಉಭಯ ರಾಷ್ಟ್ರಗಳು ಅಧಿಕಾರಿಗಳು ಗಡಿ ಸಮಸ್ಯೆಯನ್ನು ಪರಿಹರಿಸಲು ರಾಜತಾಂತ್ರಿಕ ಮತ್ತು ಮಿಲಿಟರಿ ಮಾತುಕತೆಗಳಲ್ಲಿ ತೊಡಗಿದ್ದರು. ಭಾರತ ಸೈನ್ಯ ಕೂಡ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿವೆ.

ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಣೆ ಗುರುವಾರ-ಶುಕ್ರವಾರ ಲಡಾಖ್‌ಗೆ ಭೇಟಿ ನೀಡಿದ್ದು, ಭಾರತದ ಭದ್ರತಾ ಸನ್ನದ್ಧತೆಯ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದರು. ಸಂಭವಿಸಬಹುದಾದ ಸಮಸ್ಯೆ ತಡೆಯಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.