ETV Bharat / bharat

ಮಹಾರಾಷ್ಟ್ರದಲ್ಲಿ ಡಿಗ್ರಿ ಅಂತಿಮ​ ವರ್ಷದ ಪರೀಕ್ಷೆ ರದ್ದುಗೊಳಿಸಿ ಆದೇಶ! - ಮಹಾರಾಷ್ಟ್ರದಲ್ಲಿ ಡಿಗ್ರಿ ಫೈನಲ್​ ಪರೀಕ್ಷೆ

ಮಹಾಮಾರಿ ಕೊರೊನಾ ಅಬ್ಬರ ಜೋರಾಗಿರುವ ಕಾರಣ ಮಹಾರಾಷ್ಟ್ರದಲ್ಲಿ ಅಂತಿಮ​ ವರ್ಷದ ಡಿಗ್ರಿ ಪರೀಕ್ಷೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Final year university
Final year university
author img

By

Published : Jun 20, 2020, 6:25 PM IST

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಅಬ್ಬರ ಜೋರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿಗೊಳಗಾಗುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಪ್ರಸಕ್ತ ಸಾಲಿನ ಡಿಗ್ರಿ ಅಂತಿಮ​ ವರ್ಷದ ಪರೀಕ್ಷೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವ ಉದಯ್ ಸಾಮಂತ್​ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಕೊರೊನಾ ಅಬ್ಬರ ಜೋರಾಗಿರುವ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಪರೀಕ್ಷೆ ಬರೆಸದೆ ಪದವಿ ಪಡೆದುಕೊಳ್ಳುವ ಅಂತಿಮ ವರ್ಷದ ವಿದ್ಯಾರ್ಥಿಳನ್ನು ಪಾಸ್​ ಮಾಡಲಾಗುವುದು ಎಂದಿರುವ ಸಚಿವರು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ನಂತರ ಬರೆಯಬಹುದು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ತುರ್ತು ಸ್ಥಿತಿ ನಿರ್ವಹಣಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿರುವ ಸಚಿವರು, ರಾಜ್ಯದಲ್ಲಿ ವೃತ್ತಿಪರ, ವೃತ್ತಿಯೇತರ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಎರಡು ಆಫರ್​​​ ನೀಡಲಾಗಿದೆ. ಇದೇ ವೇಳೆ ಎಂಜಿನಿಯರಿಂಗ್​, ಫಾರ್ಮಸಿ, ಹೋಟೆಲ್​ ಮ್ಯಾನೆಜ್​ಮೆಂಟ್​​, ಎಂಬಿಎ ಸೇರಿದಂತೆ ವಿವಿಧ ಕೋರ್ಸ್​ಗಳಿಗೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ.

ಸದ್ಯ ಮಹಾರಾಷ್ಟ್ರದಲ್ಲಿ 1,24,331 ಕೇಸ್​ಗಳು ಕಾಣಿಸಿಕೊಂಡಿದ್ದು, ಅದರಲ್ಲಿ 55,665 ಆ್ಯಕ್ಟೀವ್​ ಕೇಸ್​ಗಳಿವೆ. ಉಳಿದಂತೆ 5,893 ಜನರು ಸಾವನ್ನಪ್ಪಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.