ನೋಯಿಡಾ : ಜಾಗತಿಕ ಮಾರುಕಟ್ಟೆಯಲ್ಲಿ ಅಮೇಜಾನ್ ತನ್ನ ಭದ್ರ ಬಾಹುಗಳನ್ನು ಚಾಚಿದೆ. ಕೋಟ್ಯಂತರ ಮಂದಿ ನಿತ್ಯ ಈ ಅಮೇಜಾನ್ ಮಾರುಕಟ್ಟೆಯೊಂದಿಗೆ ವ್ಯವಹರಿಸುತ್ತಿದ್ದಾರೆ. ಹೀಗೆ ಹೆಸರು ಮಾಡಿರುವ ಅಮೇಜಾನ್ ಇದೀಗ ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತರುವ ಹೀನ ಕೆಲಸ ಮಾಡಿದೆ. ದುಡ್ಡು ಮಾಡಲು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಅಮೇಜಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹಿಂದೂಗಳ ನಂಬಿಕೆಗಳಿಗೆ ಧಕ್ಕೆಯಾಗುವ ರೀತಿ ಅಮೇಜಾನ್ ತನ್ನ ಉತ್ಪನ್ನಗಳನ್ನು ಮುದ್ರಿಸಿ ಮಾರಾಟ ಮಾಡಿದೆ. ಇದರಿಂದ ಹಿಂದೂಗಳ ನಂಬಿಕೆಗಳಿಗೆ ಧಕ್ಕೆಯಾಗಿದ್ದು, ನೋಯಿಡಾ ಪೊಲೀಸ್ ಠಾಣೆಯಲ್ಲಿ ಅಮೇಜಾನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಮೇಜಾನ್ ಹಲವು ಬಾರಿ ಹೀಗೆ ಧಾರ್ಮಿಕ ನಂಬಿಕೆಗಳನ್ನು ಘಾಸಿಗೊಳಿಸಿದೆ. 2017ರಲ್ಲಿ ಭಾರತದ ರಾಷ್ಟ್ರೀಯ ಧ್ವಜವನ್ನು, 2018ರಲ್ಲಿ ಗೋಲ್ಡನ್ ಟೆಂಪಲ್ ಚಿತ್ರವನ್ನು ಮುದ್ರಿಸಿ ವಿವಾದಕ್ಕೆ ಗುರಿಯಾಗಿತ್ತು. ಈ ಬಗ್ಗೆ ಕೆನಡಾ ಸರ್ಕಾರಕ್ಕೆ ಟ್ವೀಟ್ ಮಾಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಅಮೇಜಾನ್ನ ಈ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ. ಈ ಕೂಡಲೇ ಕಂಪನಿಯ ಮೇಲೆ ಕಠಿಣ ಕ್ರಮ ಕೈಗೊಳ್ಳಿ ಎಂದು ಟ್ವಿಟರ್ನಲ್ಲಿ ಆಗ್ರಹಿಸಿದ್ದಾರೆ.