ಮಧುರೈ: ಮಧುರೈನ ದಕ್ಷಿಣ ಗೇಟ್‌ಲೈಟ್ ಹೌಸ್ ಬಳಿಯ ಪ್ರಸಿದ್ಧ ಬಟ್ಟೆ ಅಂಗಡಿಯ ಎದುರಿನ ಕಟ್ಟಡದಲ್ಲಿ ಮುಂಜಾನೆ 2 ಗಂಟೆ ವೇಳೆ ಅಗ್ನಿ ಅವಘಡ ಸಂಭವಿಸಿದೆ.
ಸುದ್ದಿ ತಿಳಿದು ಅಗ್ನಿಶಾಮಕ ಇಲಾಖೆ ಅಧಿಕಾರಿ ವೆಂಕಟೇಶ್ ನೇತೃತ್ವದಲ್ಲಿ ಇಲಾಖೆ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾಗ, ಹತ್ತಿರದ ಹಳೆಯ ಕಟ್ಟಡವು ಕುಸಿದಿದೆ.
ಅವಶೇಷಗಳಲ್ಲಿ ಸಿಲುಕಿದ್ದ ಅಗ್ನಿಶಾಮಕ ಇಲಾಖೆ ಅಧಿಕಾರಿ ಕೃಷ್ಣಮೂರ್ತಿ (28) ಮತ್ತು ಶಿವರಾಜನ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೆ, ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದರಿಂದ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.