ಹೈದರಾಬಾದ್ : ಇಲ್ಲಿನ ಎಲ್‌ಬಿ ನಗರದಲ್ಲಿರುವ ಶೈನ್ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಒಂದು ಮಗು ಸಾವನ್ನಪ್ಪಿ ಐದು ಮಕ್ಕಳು ಗಾಯಗೊಂಡಿದ್ದಾರೆ.
ಆಸ್ಪತ್ರೆಯ ಐಸಿಯುನಲ್ಲಿ ಸಂಭವಿಸಿದ ಅವಘಡದಲ್ಲಿ ಐದು ತಿಂಗಳ ಶಿಶು ಸಾವನ್ನಪ್ಪಿದೆ. ಅಪಘಾತದ ಸಮಯದಲ್ಲಿ ಐಸಿಯುನಲ್ಲಿ ಸುಮಾರು 42 ಚಿಕ್ಕ ಮಕ್ಕಳು ಇದ್ದರು ಎಂದು ತಿಳಿದುಬಂದಿದೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಆಸ್ಪತ್ರೆಯಲ್ಲಿದ್ದ ಉಳಿದ ರೋಗಿಗಳನ್ನು ರಕ್ಷಿಸಿ ಹತ್ತಿರದ ಲೋಟಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.