ವಲ್ಸಾದ್: ಗುಜರಾತ್ನ ವಲ್ಸಾದ್ ಜಿಲ್ಲೆಯ ಪೇಂಟ್ ಕಂಪನಿಯೊಂದರಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸರಿಗಂ ಗುಜರಾತ್ ಕೈಗಾರಿಕಾ ಅಭಿವೃದ್ಧಿ ನಿಗಮದಲ್ಲಿನ (ಜಿಐಡಿಸಿ) '7-ಇಲೆವೆನ್' ಎಂಬ ಪೇಂಟ್ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ. ಆದರೆ, ಅನೇಕ ಉತ್ಪನ್ನಗಳು ಬೆಂಕಿಗಾಹುತಿಯಾಗಿವೆ.
ಬೆಂಕಿಯನ್ನು ನಿಯಂತ್ರಣಕ್ಕೆ ತರಲು ಅಗ್ನಿ ಶಾಮಕ ದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.