ನವದೆಹಲಿ: ಸಂಸತ್ ಭವನಕ್ಕೆ ಹೊಂದಿಕೊಂಡಿರುವ ಕಟ್ಟಡದ ಆರನೇ ಮಹಡಿಯಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ.
ಅಗ್ನಿ ನಿಯಂತ್ರಿಸಲು ಏಳು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಸಂಸತ್ ಭವನದೊಂದಿಗೆ ಅಟ್ಯಾಚ್ ಆಗಿರುವ ಕಟ್ಟಡದ 6 ನೇ ಮಹಡಿಯಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ಸದ್ಯ ನಿಯಂತ್ರಣಕ್ಕೆ ತರಲಾಗಿದೆ ಎಂದು ಸಿಬ್ಬಂದಿಯೊಬ್ಬರು ಮಾಹಿತಿ ನೀಡಿದ್ದಾರೆ.