ಇಂದೋರ್: ಮಧ್ಯ ಪ್ರದೇಶದ ಇಂದೋರ್ನ ವಿದ್ಯುತ್ ಪೂರೈಕೆ ಮುಖ್ಯ ಘಟಕವೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಟ್ರಾನ್ಸ್ಫಾರ್ಮರ್ವೊಂದರಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ವಿದ್ಯುತ್ ಪೂರೈಕೆ ಘಟಕವನ್ನ ಆವರಿಸಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾದ ಬಗ್ಗೆ ವರದಿಯಾಗಿಲ್ಲ. ಈ ಅವಘಡದಿಂದ ವಿದ್ಯುತ್ ಪೂರೈಕೆಯಲ್ಲಿ ಭಾರೀ ವ್ಯತ್ಯಯವಾಗಿದೆ ಎನ್ನಲಾಗಿದೆ. ಇನ್ನು ಘಟನೆಗೆ ಕಾರಣ ಏನು ಅಂತಾ ಇನ್ನೂ ತಿಳಿದು ಬಂದಿಲ್ಲ.