ETV Bharat / bharat

ದೆಹಲಿಯ ಮಾಸ್ಕ್​ ತಯಾರಿಕಾ ಘಟಕದಲ್ಲಿ ಬೆಂಕಿ : ಓರ್ವ ಅಗ್ನಿಗಾಹುತಿ - ದೆಹಲಿಯ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ

ಕಾರ್ಖಾನೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿದ್ದು, ಫ್ಯಾಕ್ಟರಿಯ ಗೋಡೆ ಮತ್ತು ಬಾಗಿಲು ಮುರಿದು ಕಾರ್ಖಾನೆಯ ಒಳಗೆ ಸಿಲುಕಿದ್ದವರನ್ನು ರಕ್ಷಿಸಲಾಗಿದೆ..

Fire broke out in mask making factory 1 died and 2 lives saved
ಮಾಸ್ಕ್​ ತಯಾರಿಕಾ ಘಟಕದಲ್ಲಿ ಬೆಂಕಿ
author img

By

Published : Dec 26, 2020, 9:52 AM IST

ನವದೆಹಲಿ : ಪಶ್ಚಿಮ ದೆಹಲಿಯ ಮಾಯಾಪುರಿ ಪ್ರದೇಶದಲ್ಲಿರುವ ಮಾಸ್ಕ್​ ತಯಾರಿಕಾ ಫ್ಯಾಕ್ಟರಿಯೊಂದರಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಬೆಂಕಿ ನಂದಿಸಲು 6ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಸ್ಥಳದಲ್ಲೇ ಬೀಡುಬಿಟ್ಟಿವೆ. ಘಟನೆಯಲ್ಲಿ 45 ವರ್ಷದ ನೌಕರ ಬೆಂಕಿಗಾಹುತಿಯಾಗಿದ್ದಾರೆ. ಕಾರ್ಖಾನೆಯ ಕಚ್ಚಾ ವಸ್ತುಗಳು ಮತ್ತು ಯಂತ್ರಗಳು ಬೆಂಕಿಗಾಹುತಿಯಾಗಿದ್ದು, ಅಪಾರ ಹಾನಿಯುಂಟಾಗಿದೆ.

ಮಾಸ್ಕ್​ ತಯಾರಿಕಾ ಘಟಕದಲ್ಲಿ ಬೆಂಕಿ

ಕಾರ್ಖಾನೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿದ್ದು, ಫ್ಯಾಕ್ಟರಿಯ ಗೋಡೆ ಮತ್ತು ಬಾಗಿಲು ಮುರಿದು ಕಾರ್ಖಾನೆಯ ಒಳಗೆ ಸಿಲುಕಿದ್ದವರನ್ನು ರಕ್ಷಿಸಲಾಗಿದೆ. ಅಗ್ನಿ ಅವಘಡದಲ್ಲಿ ಗಾಯಗೊಂಡವರನ್ನು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಗುಂಡಿನ ಚಕಮಕಿ : ಓರ್ವ ಉಗ್ರ ಸಾವು, ಇಬ್ಬರು ಭದ್ರತಾ ಸಿಬ್ಬಂದಿ ಗಾಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.