ಶಿಮ್ಲಾ(ಹಿಮಾಚಲಪ್ರದೇಶ): ಹಿಮಾಚಲ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಶಿಮ್ಲಾ ಜಿಲ್ಲೆ ದುಗ್ಯಾನಿ ಎಂಬ ಹಳ್ಳಿಯಲ್ಲಿ ಆಕಸ್ಮಿಕ ಬೆಂಕಿಯಿಂದ 80 ವರ್ಷದ ವೃದ್ಧೆ ಸಜೀವ ದಹನವಾಗಿದ್ದಾರೆ. ಬೆಂಕಿಯ ಜ್ವಾಲೆಗೆ 10 ಮನೆಗಳು ಸುಟ್ಟು ಕರಕಲಾಗಿವೆ.
ಸುದ್ದಿ ತಿಳಿದು ಸ್ಥಳಕ್ಕಾಗಮಿಸಿರುವ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಸಿಕೊಂಡಿದ್ದಾರೆ. ತನಿಖೆ ನಡೆಸುತ್ತಿರುವುದಾಗಿ ಡಿಎಸ್ಪಿ ಸುನೀಲ್ ನೇಗಿ ತಿಳಿಸಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಮಹಾರಾಷ್ಟ್ರದಲ್ಲಿ ಸಂಭವಿಸಿದ್ದ ಭಾರಿ ಅಗ್ನಿ ಅವಘಡದಲ್ಲಿ ಬರೋಬ್ಬರಿ 100 ಮನೆಗಳಿಗೆ ಹಾನಿಯಾಗಿತ್ತು.