ರಾಜಸ್ತಾನ: ಜೈಪುರದದಲ್ಲಿ ಬಜಾಜ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೂರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಲ್ಲಿ ಮೂವರು ಕಾರ್ಮಿಕರು ಜೀವಂತವಾಗಿ ಸುಟ್ಟುಹೋಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಅಜರ್ ಹುಸೇನ್, ನಿಜಾಮ್ ಮತ್ತು ಸೌರವ್ ಅಲಿಯಾಸ್ ಸಾದಿಕ್ ಮೃತರು. ತೀವ್ರವಾಗಿ ಗಾಯಗೊಂಡ ಸೌರಭ್ ಮತ್ತು ಚಮರ್ ಬಹದ್ದೂರ್ರನ್ನು ಚಿಕಿತ್ಸೆಗಾಗಿ ಜೈಪುರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಲ್ಲಿದ್ದ ಉಳಿದ ಕಾರ್ಮಿಕರನ್ನು ಪೊಲೀಸರು ಸ್ಥಳೀಯರ ಸಹಾಯದಿಂದ ಹೊರ ಕರೆತಂದಿದ್ದಾರೆ.
ಈ ಘಟನೆ ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾಗಿದೆ ಎಂದು ಪ್ರಾರ್ಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಕಟ್ಟಡವೂ ಅನಿತಾ ಕಾಲೋನಿಯಲ್ಲಿ ವಾಸಿಸುತ್ತಿರುವ ಅನನ್ಯ ಅಗರ್ವಾಲ್ ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಒಂದು ಘಂಟೆ ನಂತರ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.