ಸೀತಾಮರ್ಹಿ: ಭಾರತ - ನೇಪಾಳ ಗಡಿಯಲ್ಲಿ ನೇಪಾಳ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಪ್ರಜೆ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ.
ಭಾರತ - ನೇಪಾಳ ಗಡಿ ಪ್ರದೇಶವಾದ ಬಿಹಾರದ ಸೀತಾಮರ್ಹಿ ಜಿಲ್ಲೆಯ ಸೋನ್‌ಬರ್ಸಾದ ಜಾಂಕಿ ಗ್ರಾಮದ ಸಮೀಪ ಘಟನೆ ನಡೆದಿದೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸ್ಥಳಕ್ಕೆ ಭಾರತೀಯ ಪೊಲೀಸರು ದೌಡಾಯಿಸಿದ್ದು, ಬಿಗಿ ಭದ್ರತೆ ಕೈಗೊಂಡಿದ್ದಾರೆ.