ETV Bharat / bharat

ಕಾಶ್ಮೀರದ ಮೊದಲ ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್​.. - ಕಾಶ್ಮೀರದ ಮೊದಲ ಕೊರೊನಾ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್​

ಜಮ್ಮು ಮತ್ತು ಕಾಶ್ಮೀರದಲ್ಲಿ ಈವರೆಗೆ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 70ಕ್ಕೇರಿದೆ. ಇಂದು ಒಂದೇ ದಿನ ಜಮ್ಮು ಪ್ರಾಂತ್ಯದಲ್ಲಿ ಐದು ಪಾಸಿಟಿವ್​ ಪ್ರಕರಣಗಳು ವರದಿಯಾಗಿದ್ದರೆ, ಕಾಶ್ಮೀರ ಪ್ರದೇಶದಲ್ಲಿ ಮೂವರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಇಂದು ಸೋಂಕಿತರೊಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಮುಕ್ತಿ ಪಡೆದಿದ್ದಾರೆ.

Corona
ಕೊರೊನಾ
author img

By

Published : Apr 2, 2020, 8:02 PM IST

ಶ್ರೀನಗರ : ಕಾಶ್ಮೀರದ ಮೊದಲ ಕೊರೊನಾ ಸೋಂಕಿತ ರೋಗಿಯು ಸಂಪೂರ್ಣವಾಗಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾನೆ. ಈ ಬಗ್ಗೆ ಕೇಂದ್ರಾಡಳಿತ ಪ್ರದೇಶದ ಆಡಳಿತ ಪ್ರಧಾನ ಕಾರ್ಯದರ್ಶಿ ರೋಹಿತ್ ಕನ್ಸಾಲ್ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಈವರೆಗೆ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 70ಕ್ಕೇರಿದೆ. ಇಂದು ಒಂದೇ ದಿನ ಜಮ್ಮು ಪ್ರಾಂತ್ಯದಲ್ಲಿ ಐದು ಪಾಸಿಟಿವ್​ ಪ್ರಕರಣಗಳು ವರದಿಯಾಗಿದ್ದರೆ, ಕಾಶ್ಮೀರ ಪ್ರದೇಶದಲ್ಲಿ ಮೂವರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಇಂದು ಸೋಂಕಿತರೊಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಮುಕ್ತಿ ಪಡೆದಿದ್ದಾರೆ.

ಈವರೆಗೆ 10,694 ವ್ಯಕ್ತಿಗಳನ್ನು ಕ್ವಾರಂಟೈನ್​ನಲ್ಲಿಡಲಾಗಿದೆ. 65 ಮಂದಿ ಆಸ್ಪತ್ರೆಗಳಲ್ಲಿ ಐಸೋಲೇಷನ್​ನಲ್ಲಿದ್ದಾರೆ. 622 ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಆಗಿದ್ರೆ, 4,109 ಜನರನ್ನು ಮನೆಯಲ್ಲೇ ಸರ್ಕಾರದ ಕಣ್ಗಾವಲಿನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈವರೆಗೆ ಇಬ್ಬರು ಸಾವನ್ನಪ್ಪಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.