ಮಧುಬನಿ (ಬಿಹಾರ): ಟ್ರಕ್ ಹಾಗೂ ಬೊಲೆರೋ ವಾಹನ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ಬಿಹಾರ ರಾಜ್ಯದ ಮಧುಬನಿ ಜಿಲ್ಲೆಯ ಜಯನಗರದ ಡಿಬಿ ಕಾಲೇಜಿನ ಬಳಿ ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ದರ್ಬಾಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೊಲೆರೋದಲ್ಲಿದ್ದ ಮೃತರು ಗಿಡಮೂಲಿಕೆಗಳ ವ್ಯಾಪರಸ್ಥರಾಗಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯರ ಸಹಾಯದಿಂದ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಐವರನ್ನ ಕಳೆದುಕೊಂಡ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.