ಗುಜರಾತ್: ಚಲಿಸುತ್ತಿದ್ದ ಕಾರೊಂದು ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಮೆಹಸಾನ್ ಜಿಲ್ಲೆಯ ಉನ್ಜಾ ತಾಲೂಕಿನ ವರವಾಡ ಗ್ರಾಮದ ಬಳಿ ಸಂಭವಿಸಿದೆ.
ಖೇರಾಲುವಿನ ಪಾಂಡ್ಯ ಕುಟುಂಬದ ಸದಸ್ಯರು ಕಾರಿನಲ್ಲಿ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದರು. ಬಳಿಕ ಸ್ಥಳೀಯರು ಕಾರನ್ನು ನೀರಿನಿಂದ ಹೊರತೆಗೆದಿದ್ದಾರೆ.
ಆದ್ರೆ, ಅಷ್ಟರಲ್ಲಿ ಕಾರಿನಲ್ಲಿದ್ದ ತಂದೆ ಮತ್ತು ಮಗ ಸಾವನ್ನಪ್ಪಿದ್ದಾರೆ. ಮೂವರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.