ಜಾಬುವಾ(ಮಧ್ಯಪ್ರದೇಶ): 35 ವರ್ಷದ ಮಹಿಳೆಯೊಬ್ಬಳ ಮೇಲೆ ಓರ್ವ ಅಪ್ರಾಪ್ತ ಸೇರಿ ಐವರು ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಕಾಮುಕರ ಬಂಧನ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.
ಮಧ್ಯಪ್ರದೇಶದ ಜಾಬುವಾದಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯ ಅಪಹರಣ ಮಾಡಿ ಅರಣ್ಯದೊಳಗೆ ಎಳೆದೊಯ್ದಿರುವ ಕಾಮುಕರು ದುಷ್ಕೃತ್ಯವೆಸಗಿದ್ದಾರೆ. ಮರುದಿನವೂ ಕೂಡ ಅದೇ ರೀತಿ ಕೃತ್ಯವೆಸಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ವೇಳೆ ,ಆಕೆಗೆ ಘಟನೆ ಬಗ್ಗೆ ಮಾಹಿತಿ ನೀಡಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.
ಮಹಿಳೆ ನೀಡಿರುವ ದೂರಿನನ್ವಯ ಈಗಾಗಲೇ ಐವರ ಬಂಧನ ಮಾಡಲಾಗಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಅಕ್ಟೋಬರ್ 17 ಹಾಗೂ 18ರಂದು ಈ ಘಟನೆ ನಡೆದಿದೆ.