ನಾಂದೇಡ್(ಮಹಾರಾಷ್ಟ್ರ): ಇಬ್ಬರು ಶಿಕ್ಷಕರು ಸೇರಿದಂತೆ ಐವರು ಕಾಮುಕರು ವಿದ್ಯಾರ್ಥಿನಿವೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಮರಾಠವಾಡದಲ್ಲಿ ನಡೆದಿದೆ.
ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇಲೆ ಈ ಕೃತ್ಯವೆಸಗಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದ ವಿಡಿಯೋ ತೋರಿಸುವುದಾಗಿ ಶಾಲೆಯ ಕೊಠಡಿಯಲ್ಲಿ ಕರೆದುಕೊಂಡು ಹೋಗಿರುವ ಐವರು ಆಕೆಗೆ ಅಶ್ಲೀಲ ವಿಡಿಯೋ ತೋರಿಸಿ ತದನಂತರ ಅತ್ಯಾಚಾರವೆಸಗಿದ್ದಾರೆ.
ಘಟನೆ ಬಳಿಕ ಮನೆಗೆ ಬಂದ ಬಾಲಕಿ ಈ ಕೃತ್ಯದ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದ್ರೂ ಅವರು ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.
ಸರಿ ಸುಮಾರು ತಿಂಗಳ ಹಿಂದೆ ಈ ಘಟನೆ ನಡೆದಿದ್ದು, ಇದೀಗ ಇದೀಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಇಬ್ಬರು ಶಿಕ್ಷಕರು ಹಾಗೂ ಮೂವರು ಸಹಚರರ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಶಾಲಾ ಆಡಳಿತ ಮಂಡಳಿ ಬಳಿ ಪೋಷಕರು ತೆರಳಿದ್ದ ವೇಳೇ ಅವರಿಗೆ ಬೆದರಿಕೆ ಹಾಕಿ ಪೊಲೀಸರಿಗೆ ದೂರು ನೀಡದಂತೆ ಬೆದರಿಕೆ ಹಾಕಿದ್ದರು ಎಂದು ತಿಳಿದು ಬಂದಿದೆ.