ಹೈದರಾಬಾದ್: ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಆಟೋ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಮೃತಪಟ್ಟಿದ್ದಾರೆ.
ನಿಜಾಮಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಎದುರಿನಿಂದ ವೇಗವಾಗಿ ಚಲಿಸುತ್ತಿದ್ದ ಕಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಐವರು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಟೋದಲ್ಲಿದ್ದ ಐವರು ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.