ಝಾನ್ಸಿ: ನಿರ್ಮಾಣ ಹಂತದ ಗೋಡೆ ಕುಸಿದು ಬಿದ್ದ ಪರಿಣಾಮವಾಗಿ ಐವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದಿದೆ.
ಇದರಲ್ಲಿ 15 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಇನ್ನಷ್ಟು ಜನ ಸಿಲುಕಿರುವ ಸಾಧ್ಯತೆಯಿದೆ. ಈ ಘಟನೆ ಕುರಿತಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.