ಜಬಲ್ಪುರ್ (ಮಧ್ಯ ಪ್ರದೇಶ): ಐದು ವರ್ಷದ ಅಪ್ರಾಪ್ತೆ ಮೇಲೆ 15 ವರ್ಷದ ಬಾಲಕ ಅತ್ಯಾಚಾರ ಎಸಗಿ ಆಕೆಗೆ ಹೊಡೆದಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಮನೆಯಲ್ಲಿ ಬಾಲಕಿ ಒಬ್ಬಳೇ ಇರುವ ವೇಳೆ ಚಾಕೊಲೇಟ್ ಆಸೆ ತೋರಿಸಿದ ಆರೋಪಿಯು, ಆಕೆಯನ್ನು ಹತ್ತಿರದ ಪೊದೆ ಬಳಿ ಕರೆದೊಯ್ದು ಈ ಕೃತ್ಯ ಎಸೆಗಿದ್ದಾನೆ ಎಂದು ಗೋರಬಜಾರ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ದಿಲೀಪ್ ಶ್ರೀವಾತ್ಸವ್ ತಿಳಿಸಿದ್ದಾರೆ.
ಹುಡುಗಿ ಕಿರುಚಲು ಪ್ರಾರಂಭಿಸುತ್ತಿದ್ದಂತೆ, ಆರೋಪಿ ಬಾಲಕನು ಆಕೆಗೆ ಹೊಡೆದು, ಆಕೆಯನ್ನು ಎಸೆದು ಪರಾರಿಯಾಗಿದ್ದಾನೆ. ಕಿರುಚಾಟ ಕೇಳಿಸಿಕೊಂಡು ಸ್ಥಳಕ್ಕೆ ಓಡಿಬಂದ ಸ್ಥಳೀಯರು ಬಾಲಕಿಯನ್ನು ರಕ್ಷಿಸಿ, ಆಕೆಯ ಮನೆಗೆ ಕರೆದೊಯ್ದಿದ್ದಾರೆ. ಬಾಲಕಿಯ ಪೋಷಕರು ಕೆಲಸ ಮುಗಿಸಿ ಮನೆಗೆ ಬರುವಷ್ಟರಲ್ಲಿ ಆಕೆಯನ್ನು ವೈದ್ಯಕೀಯ ಪರೀಕ್ಷೆಗೆಂದು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆರೋಪಿ ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಐಪಿಸಿ ಸೆಕ್ಷನ್ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ ಎಂದು ಶ್ರೀವಾತ್ಸವ್ ತಿಳಿಸಿದ್ದಾರೆ.