ನವದೆಹಲಿ: ವಲಸೆ ಕಾರ್ಮಿಕರಿಗೆ ಆಹಾರ, ನೀರು, ಔಷಧಿ, ಬಟ್ಟೆ, ಚಪ್ಪಲಿ ಇತ್ಯಾದಿಗಳನ್ನು ಉಚಿತವಾಗಿ ನೀಡಲಾಗಿದೆ ಎಂದು ಕೇಂದ್ರವು ವಲಸೆ ಕಾರ್ಮಿಕರ ವಿಷಯದ ಬಗ್ಗೆ ಸುಪ್ರೀಂಕೊರ್ಟ್ಗೆ ಸಲ್ಲಿಸಿದ ಅಫಿಡವಿಟ್ನಲ್ಲಿ ತಿಳಿಸಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಹೆಚ್‌ಎಐ) ರಸ್ತೆಗಳಲ್ಲಿ ನಡೆದುಕೊಂಡು ಹೋಗುತ್ತಿರುವ ವಲಸಿಗರನ್ನು ಹತ್ತಿರದ ರೈಲ್ವೆ ನಿಲ್ದಾಣಗಳಿಗೆ ಪ್ರಯಾಣಿಸಲು ಸಾರಿಗೆ ಒದಗಿಸುವ ಮೂಲಕ ವಲಸೆ ಕಾರ್ಮಿಕರನ್ನು ಸಂಚಾರಕ್ಕೆ ಸಹಾಯ ಮಾಡಿದೆ ಎಂದು ಕೇಂದ್ರ ಹೇಳಿದೆ.
ರಾಜ್ಯ ಸರ್ಕಾರಗಳು ಒದಗಿಸುವ ಸೇವೆಗಳ ಹೊರತಾಗಿ 1.63 ಕೋಟಿ ಊಟದ ಪಟ್ಟಣ ಮತ್ತು 2.10 ಕೋಟಿಗೂ ಹೆಚ್ಚು ಪ್ಯಾಕ್ ಮಾಡಿದ ಕುಡಿಯುವ ನೀರಿನ ಬಾಟಲಿಗಳನ್ನು ವಲಸಿಗರಿಗೆ ನೀಡಲಾಗಿದೆ ಎಂದು ತಿಳಿಸಿದೆ.
ಲಾಕ್ಡೌನ್ ಸಮಯದಲ್ಲಿ ವಲಸೆ ಕಾರ್ಮಿಕರ ಸಮಸ್ಯೆಗಳಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಕೇಂದ್ರ, ರಾಜ್ಯಗಳು ಮತ್ತು ಇತರ ಪಕ್ಷಗಳನ್ನು ಶುಕ್ರವಾರ ಎರಡು ಗಂಟೆಗಳಿಗಿಂತ ಹೆಚ್ಚು ಕಾಲ ವಿಚಾರಣೆ ನಡೆಸಿ, ಜೂನ್ 9ರವರೆಗೆ ಆದೇಶವನ್ನು ಕಾಯ್ದಿರಿಸಿದೆ.