ರಾಯ್‌ಪುರ: ಛತ್ತೀಸ್ಗಢದ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ಕೋಮಾದಲ್ಲಿದ್ದಾರೆ ಎಂದು ಆಸ್ಪತ್ರೆಯ ಮೆಡಿಕಲ್ ಬುಲೆಟಿನ್ನಲ್ಲಿ ತಿಳಿಸಲಾಗಿದೆ. ಈ ಮೊದಲು ಸಂಭವಿಸಿದ್ದ ಹೃದಯಾಘಾತದ ಹಿನ್ನೆಲೆಯಲ್ಲಿ ಅವರನ್ನು ರಾಯಪುರದ ಬಾಲಾಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಈಗ ಅವರ ಮೆದುಳಿನಲ್ಲಿ ಊತ ಕಂಡು ಬಂದಿರುವ ಕಾರಣದಿಂದ ಕೋಮಾ ಪರಿಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ಸ್ಪಷ್ಟನೆ ನೀಡಿವೆ. ಅಜಿತ್ ಜೋಗಿಯವರು ಮೇ 9 ರಂದು ತಮ್ಮ ನಿವಾಸದಲ್ಲಿ ಪ್ರಜ್ಞೆ ತಪ್ಪಿದ್ದರು.
2000-2003ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.