ಮುಂಬೈ: ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ನಿರೀಕ್ಷೆ ಮಾಡದ ಕೆಲ ಪ್ರಮುಖರು ಭಾಗಿಯಾಗಿ ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದ್ದಾರೆ.
ಸಂಜೆ ಶಿವಾಜಿ ಪಾರ್ಕ್ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಬಿಜೆಪಿ ಜತೆ ಉತ್ತಮ ಸಂಬಂಧ ಹೊಂದಿರುವ ಮುಖೇಶ್ ಅಂಬಾನಿ ಹಾಗೂ ಅವರ ಪತ್ನಿ ನೀತಾ ಅಂಬಾನಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಉದ್ಧವ್ ಠಾಕ್ರೆ ಸೋದರ ಸಂಬಂಧಿ ರಾಜ್ ಠಾಕ್ರೆ ಹಾಗೂ ಡಿಎಂಕೆ ಮುಖ್ಯಸ್ಥ ಸ್ಟಾಲಿನ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.
-
Mumbai: Former Maharashtra CM Devendra Fadnavis and DMK President MK Stalin were present at the oath ceremony of Uddhav Thackeray as Maharashtra CM, earlier today. pic.twitter.com/tOyzhRt4cM
— ANI (@ANI) November 28, 2019 " class="align-text-top noRightClick twitterSection" data="
">Mumbai: Former Maharashtra CM Devendra Fadnavis and DMK President MK Stalin were present at the oath ceremony of Uddhav Thackeray as Maharashtra CM, earlier today. pic.twitter.com/tOyzhRt4cM
— ANI (@ANI) November 28, 2019Mumbai: Former Maharashtra CM Devendra Fadnavis and DMK President MK Stalin were present at the oath ceremony of Uddhav Thackeray as Maharashtra CM, earlier today. pic.twitter.com/tOyzhRt4cM
— ANI (@ANI) November 28, 2019
ಮಹಾರಾಷ್ಟ್ರದಲ್ಲಿ ಬಿಜೆಪಿ+ಶಿವಸೇನೆ ನಡುವೆ ವೈಮನಸ್ಸು ಉಂಟಾದ ಬಳಿಕ ಶಿವಸೇನೆ ವಿರುದ್ಧ ದೇವೇಂದ್ರ ಫಡ್ನವೀಸ್ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಉದ್ಧವ್, ಸಮಯ ಬಂದಾಗ ಎಲ್ಲದ್ದಕ್ಕೂ ಉತ್ತರ ನೀಡುವೆ ಎಂದಿದ್ದರು.
ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಸೇರಿದಂತೆ ಪ್ರಮುಖರಿಗೆ ಆಹ್ವಾನ ನೀಡಲಾಗಿತ್ತು.