ಅಹಮದಾಬಾದ್: ಗುಜರಾತ್ನ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಅವರ ಆಪ್ತ ಸಹಾಯಕರೊಬ್ಬರು ತಿಳಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ 79 ವರ್ಷದ ಶಂಕರ್ ಸಿಂಗ್, ವೈದ್ಯರ ಸಲಹೆಯ ಮೇರೆಗೆ ಗುಜರಾತ್ನಲ್ಲಿರುವ ತಮ್ಮ ನಿವಾಸದಲ್ಲಿ ಕ್ವಾರಂಟೈನ್ನಲ್ಲಿದ್ದರು. ಶನಿವಾರ ವಘೇಲಾರ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು, ಇಂದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಘೇಲಾ ಅವರು, 1996ರ ಅಕ್ಟೋಬರ್‌ನಿಂದ 1997ರ ಅಕ್ಟೋಬರ್‌ವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಪಕ್ಷದ ಮೂಲಕ ರಾಜಕೀಯ ಜೀವನಕ್ಕೆ ಕಾಲಿಟ್ಟ ಅವರು, ಬಳಿಕ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಪ್ರಸ್ತುತ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (NCP)ದಲ್ಲಿದ್ದಾರೆ.
ಬಿಹಾರ ಸಚಿವನಿಗೆ ಸೋಂಕು:
ಬಿಹಾರದ ಸಚಿವರೊಬ್ಬರಿಗೆ ಕೋವಿಡ್ ಪಾಸಿಟಿವ್ ಬಂದಿದ್ದು, ಸದ್ಯ ಅವರು ಕತಿಹಾರ್ನಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಎರಡು ದಿನಗಳ ಹಿಂದೆ ರಾಜ್ಯ ಸಚಿವಾಲಯದಲ್ಲಿ ನಡೆದಿದ್ದ ಸಭೆಯಲ್ಲಿ ಇವರು ಪಾಲ್ಗೊಂಡಿದ್ದರು.