ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ 10 ದಿನಗಳ ಹಿಂದೆ ಅಪರಿಚಿತ ವ್ಯಕ್ತಿಗಳ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಉಗ್ರ ಮೃತಪಟ್ಟಿದ್ದಾನೆ.
ಪುಲ್ವಾಮಾದ ಕಾಕ್ಪೊರಾ ನಿವಾಸಿ ತನ್ವೀರ್ ಅಹ್ಮದ್ ಸೋಫಿ ಭಯೋತ್ಪಾದಕ ಚಟುವಟಿಕೆಗಳಿಂದ ಹಿಂದೆ ಸರಿದಿದ್ದನು. ಅಕ್ಟೋಬರ್ 15 ರಂದು ಈತನ ಮೇಲೆ ಗುಂಡು ಹಾರಿಸಲಾಗಿದ್ದು, ಎಸ್‌ಎಂಎಚ್‌ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.