ETV Bharat / bharat

ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.

Former Pres Pranab Mukherjee in critical condition
ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ
author img

By

Published : Aug 11, 2020, 3:04 PM IST

ನವದೆಹಲಿ: ಶಸ್ತ್ರಚಿಕಿತ್ಸೆ ಬಳಿಕ ವೆಂಟಿಲೇಟರ್​​ ಸಹಾಯದೊಂದಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಇನ್ನಷ್ಟು ಗಂಭೀರವಾಗಿದೆ.

ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರಿಗೆ ನಿನ್ನೆ ಕೊರೊನಾ​​ ಸೋಂಕು ದೃಢಪಟ್ಟಿತ್ತು. ಬಳಿಕ ರಾತ್ರಿ ದೆಹಲಿಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಅವರನ್ನು ವೆಂಟಿಲೇಟರ್​ನಲ್ಲಿ ಇರಿಸಲಾಗಿತ್ತು. ಇದೀಗ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ರಾಜಕೀಯ ನಾಯಕರು ಪ್ರಣಬ್ ಮುಖರ್ಜಿ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.