ETV Bharat / bharat

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್ - ಏಮ್ಸ್​

ಮಾಜಿ ಪ್ರಧಾನಿ ಹಾಗೂ ಅರ್ಥಶಾಸ್ತ್ರಜ್ಞ ಡಾ.ಮನಮೋಹನ್​ ಸಿಂಗ್​ ಸಂಪೂರ್ಣ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

former prime minister manmohan singh
ಮಾಜಿ ಪ್ರಧಾನಿ ಮನಮೋಹನ್​ ಸಿಂಗ್
author img

By

Published : May 12, 2020, 1:27 PM IST

ನವದೆಹಲಿ: ಎದೆನೋವು ಕಾಣಿಸಿಕೊಂಡಿದ್ದರಿಂದ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ ಅವರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಮೇ 10ರಂದು ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಕಾರ್ಡಿಯೋ-ಥೋರಾಸಿಕ್ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಹೃದ್ರೋಗ ತಜ್ಞ ಡಾ. ನಿತೀಶ್​ ನಾಯ್ಕ್​​ ನೇತೃತ್ವದ ತಂಡ ಚಿಕಿತ್ಸೆ ನೀಡಿದೆ. 2009ರಲ್ಲೂ ಇವರಿಗೆ ಹೃದಯದ ಬೈಪಾಸ್​ ಸರ್ಜರಿ ಮಾಡಲಾಗಿತ್ತು.

ಡಾ.ಸಿಂಗ್‌ ಅವರ ಕೋವಿಡ್‌ ರಿಪೋರ್ಟ್‌ ನೆಗೆಟಿವ್‌:

ಇದರ ಜೊತೆಗೆ ಮನಮೋಹನ್​​ ಸಿಂಗ್​ ಅವರಿಗೆ ಕೋವಿಡ್​- 19 ಪರೀಕ್ಷೆ ಮಾಡಲಾಗಿದ್ದು ವರದಿ ನೆಗೆಟಿವ್ ಬಂದಿದೆ. ಉಳಿದ ಪರೀಕ್ಷೆಗಳ ಫಲಿತಾಂಶಕ್ಕಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕಾರಿ ಮೂಲಗಳು ತಿಳಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.