ETV Bharat / bharat

ಕೇಂದ್ರ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ.. ಪ್ರಧಾನಿ ಮೋದಿ, ರಾಜನಾಥ್​ ಸಿಂಗ್ ಸಂತಾಪ

author img

By

Published : Sep 27, 2020, 10:25 AM IST

ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನರಾಗಿದ್ದಾರೆ.

Former Union Minister Jaswant Singh passes away
ಸಚಿವ ಜಸ್ವಂತ್ ಸಿಂಗ್ ನಿಧನ

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ (82) ಅವರು ಇಂದು ನಿಧನರಾಗಿದ್ದಾರೆ.

ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಜಸ್ವಂತ್ ಸಿಂಗ್ ಅವರ ನಿಧನದಿಂದ ತೀವ್ರ ನೋವಾಗಿದೆ. ರಕ್ಷಣಾ ಮಂತ್ರಿಯ ಉಸ್ತುವಾರಿ ಸೇರಿದಂತೆ ಹಲವು ರೀತಿಯಲ್ಲಿ ಅವರು ರಾಷ್ಟ್ರಕ್ಕೆ ಸೇವೆ ಸಲ್ಲಿಸಿದ್ದರು. ಅವರು ತಮ್ಮನ್ನು ಪರಿಣಾಮಕಾರಿ ಸಚಿವರು ಮತ್ತು ಸಂಸದರು ಎಂದು ಗುರುತಿಸಿಕೊಂಡಿದ್ದರು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದಾರೆ.

  • Shri Jaswant Singh ji would be remembered for his intellectual capabilities and stellar record in service to the nation. He also played a key role in strengthening the BJP in Rajasthan. Condolences to his family and supporters in this sad hour. Om Shanti.

    — Rajnath Singh (@rajnathsingh) September 27, 2020 " class="align-text-top noRightClick twitterSection" data=" ">

ಹಿರಿಯ ನಾಯಕನ ನಿಧನಕ್ಕೆ ಪ್ರಧಾನಿ ಮೋದಿ ಕೂಡ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಜಸ್ವಂತ್ ಸಿಂಗ್ ಅವರು ನಮ್ಮ ರಾಷ್ಟ್ರಕ್ಕೆ ಶ್ರದ್ಧೆಯಿಂದ ಸೇವೆ ಸಲ್ಲಿಸಿದರು, ಮೊದಲು ಸೈನಿಕನಾಗಿ ಮತ್ತು ನಂತರ ರಾಜಕೀಯದ ಮೂಲಕ ಸೇವೆ ಸಲ್ಲಿಸಿದ್ದಾರೆ. ಅಟಲ್ ಜಿ ಅವರ ಸರ್ಕಾರದ ಅವಧಿಯಲ್ಲಿ ನಿರ್ಣಾಯಕ ಖಾತೆಗಳನ್ನು ನಿರ್ವಹಿಸಿದ್ದ ಜಸ್ವಂತ ಅವರು ಹಣಕಾಸು, ರಕ್ಷಣೆ, ವಿದೇಶಾಂಗ ವ್ಯವಹಾರಗಳಿಗೆ ಸಂಬಂಧಿಸಿದ ಖಾತೆಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದರು. ಅವರ ನಿಧನದಿಂದ ತೀವ್ರ ದುಃಖವಾಗಿದೆ.

  • Jaswant Singh Ji served our nation diligently, first as a soldier and later during his long association with politics. During Atal Ji’s Government, he handled crucial portfolios and left a strong mark in the worlds of finance, defence and external affairs. Saddened by his demise.

    — Narendra Modi (@narendramodi) September 27, 2020 " class="align-text-top noRightClick twitterSection" data=" ">

ಜಸ್ವಂತ್ ಸಿಂಗ್ ಅವರು ರಾಜಕೀಯ ಮತ್ತು ಸಮಾಜದ ವಿಷಯಗಳ ಬಗ್ಗೆ ತಮ್ಮ ಅನನ್ಯ ದೃಷ್ಟಿಕೋನದಿಂದ ಸ್ಮರಿಸಲ್ಪಡುತ್ತಾರೆ. ಅವರು ಬಿಜೆಪಿಯ ಬಲವರ್ಧನೆಗೆ ಸಹಕರಿಸಿದ್ದಾರೆ. ನಮ್ಮ ನಡುವಿನ ಸಂವಾದಗಳನ್ನು ನಾನು ಯಾವಾಗಲೂ ನೆನಪಿಸಿಕೊಳ್ಳುತ್ತೇನೆ. ಜಸ್ವಂತ್ ಸಿಂಗ್ ಅವರು ಕಳೆದ ಆರು ವರ್ಷಗಳಿಂದ ಅನಾರೋಗ್ಯವನ್ನು ಧೈರ್ಯದಿಂದ ಎದುರಿಸಿದ್ದರು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

  • Jaswant Singh Ji will be remembered for his unique perspective on matters of politics and society. He also contributed to the strengthening of the BJP. I will always remember our interactions. Condolences to his family and supporters. Om Shanti.

ಜಸ್ವಂತ್ ಸಿಂಗ್​ ಅವರು 1996-2004ರವರೆಗೆ ವಾಜಪೇಯಿ ಸರ್ಕಾರದಲ್ಲಿ ರಕ್ಷಣಾ, ವಿದೇಶಾಂಗ ವ್ಯವಹಾರಗಳು ಮತ್ತು ಹಣಕಾಸು ಖಾತೆಗಳನ್ನು ನಿರ್ವಹಿಸಿದ್ದರು. ಇವರು ನಿವೃತ್ತ ಭಾರತೀಯ ಸೇನೆಯ ಅಧಿಕಾರಿಯಾಗಿದ್ದು, ಅವರನ್ನು 2014 ರಲ್ಲಿ ಬಿಜೆಪಿಯಿಂದ ಹೊರಹಾಕಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.