ಪಶ್ಚಿಮ ಬಂಗಾಳ: ಪಟಾಕಿ ಕಾರ್ಖಾನೆ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನೈಹತಿ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಶುಕ್ರವಾರ ಸಂಜೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದರೆ, ಗಂಭಿರವಾಗಿ ಗಾಯಗೊಂಡ ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬೃಹತ್ ಸ್ಫೋಟ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ಸಿಬ್ಬಂದಿ ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಧಿ ವಿಜ್ಞಾನ ತಂಡ ಕೂಡ ಸ್ಥಳಕ್ಕೆ ಬಂದಿದ್ದು, ಸ್ಯಾಂಪಲ್ಗಳನ್ನು ಸಂಗ್ರಹಿಸಿದೆ.
ಈ ಪ್ರದೇಶದಲ್ಲಿ 100ಕ್ಕೂ ಹೆಚ್ಚು ಅಕ್ರಮ ಪಟಾಕಿ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಬಾಂಬ್ ತಯಾರಿಸಲು ಬಳಸಲಾಗುತ್ತಿದೆ. ಇಲ್ಲಿ ತಯಾರಾದ ಬಾಂಬ್ಗಳನ್ನು ಹತ್ತಿರದ ಪ್ರದೇಶಗಳಿಗೆ ಸರಬರಾಜು ಮಾಡಲಾಗುತ್ತಿದೆ. ಹೀಗಾಗಿ ಸ್ಫೋಟದ ತೀವ್ರತೆ ನೋಡಿದರೆ ಇದು ಸಾಮಾನ್ಯ ಪಟಾಕಿಳಿಂದ ಆಗಿದೆ ಎಂದು ಹೇಳಲಾಗುವುದಿಲ್ಲ. ಈ ಸಂಬಂಧ ಎನ್‌ಐಎ ತನಿಖೆ ನಡೆಸಬೇಕು ಎಂದು ಬ್ಯಾರಕ್‌ಪುರ್ ಬಿಜೆಪಿ ಶಾಸಕ ಅರ್ಜುನ್ ಸಿಂಗ್ ಒತ್ತಾಯಿಸಿದ್ದಾರೆ.