ಉತ್ತರ ಪ್ರದೇಶ: ಮಥುರಾ ಜಿಲ್ಲೆಯ ಯಮುನಾ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಬಿಹಾರದಿಂದ ದೆಹಲಿಗೆ ಹೋಗುವ ಬಸ್ಗೆ ಕ್ಯಾಂಟರ್ ಡಿಕ್ಕಿ ಹೊಡೆದಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೂಡಲೇ ಪೊಲೀಸರು ಸ್ಥಳಕ್ಕಾಗಮಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಘಟನೆಯ ವಿವರ:
ಖಾಸಗಿ ಬಸ್ನಲ್ಲಿ ಡೀಸೆಲ್ ಮುಗಿದ ಕಾರಣ ಬಸ್ ಚಾಲಕ ಬಸ್ ನಿಲ್ಲಿಸಿ ಡೀಸೆಲ್ ತೆಗೆದುಕೊಳ್ಳಲು ಪೆಟ್ರೋಲ್ ಬಂಕ್ಗೆ ಹೋಗಿದ್ದಾನೆ. ಆಗ ವೇಗವಾಗಿ ಬಂದಪ್ಪಳಿಸಿದ ಕ್ಯಾಂಟರ್ ನಿಂತಿದ್ದ ಬಸ್ಗೆ ಹಿಂದಿನಿಂದ ಗುದ್ದಿದೆ. ಪರಿಣಾಮ, ಬಸ್ನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಬಸ್ನಲ್ಲಿ ಒಟ್ಟು 68 ಪ್ರಯಾಣಿಕರಿದ್ದರು ಎಂಬ ಮಾಹಿತಿ ದೊರೆತಿದೆ.