ಐಜ್ವಾಲ್( ಕೋಹಿಮಾ): ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರಾ, ಅಸ್ಸೋಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಭೂಮಿ ಗಡ ಗಡ ನಡುಗಿದೆ.
ರಿಕ್ಟರ್ ಮಾಪಕದಲ್ಲಿ ಸುಮಾರು 2.8 ರಿಂದ 4.5 ರಷ್ಟು ಪ್ರಮಾಣದ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಸರ್ಕಾರಿ ಮೂಲಗಳ ಪ್ರಕಾರ ಈ ರಾಜ್ಯಗಳಲ್ಲಿ ಭೂಕಂಪದಿಂದಾಗಿ ಯಾವುದೇ ಸಾವು ನೋವಿನ ವರದಿಯಾಗಿಲ್ಲ.
ಗುರುವಾರ ಮಿಜೋರಾಂನಲ್ಲಿ ಎರಡು ಬಾರಿ ಭೂಮಿ ಕಂಪಿಸಿದೆ. ಭಾರತೀಯ ಭೂಗರ್ಭ ಇಲಾಖೆ ಪ್ರಕಾರ ಒಂದು ಗಂಟೆ ಅವಧಿಯಲ್ಲಿ 4.2 ಹಾಗೂ 4.5 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಹೇಳಿದೆ.