ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದೆ.
ಅಂಶಿಪೋರ ಗ್ರಾಮದ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆಂಬ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಭದ್ರತಾ ಪಡೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ರಕ್ಷಣಾ ಸಾರ್ವಜನಿಕ ಸಂಪರ್ಕ ಅಧಿಕಾರಿ (ಪಿಆರ್ಒ) ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೇ ಕುಲ್ಗಾಂನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಎಂ) ಸಂಘಟನೆಯ ಓರ್ವನನ್ನು ಸೇರಿ ಒಟ್ಟು ಮೂವರು ಭಯೋತ್ಪಾದಕರನ್ನು ಕೊಲ್ಲಲಾಗಿತ್ತು.