ಕೈಮುರ್(ಬಿಹಾರ): ಟ್ಯೂಷನ್ಗೆಂದು ತೆರಳುತ್ತಿದ್ದ ಬಾಲಕಿಯ ಮೇಲೆ ನಾಲ್ಕು ಜನ ಕಾಮುಕರ ಗುಂಪೊಂದು ಅತ್ಯಾಚಾರವೆಸಗಿರುವ ಘಟನೆಯೊಂದು ಕೈಮುರ್ ನಗರದ ಮೊಹಾನಿಯದಲ್ಲಿ ನಡೆದಿದೆ.
10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿವೋರ್ವಳು ಸಂಜೆ ಟ್ಯೂಷನ್ಗೆಂದು ತೆರಳುತ್ತಿದ್ದ ವೇಳೆ ನಾಲ್ವರ ಗುಂಪೊಂದು ಕಾರಿನಲ್ಲಿ ಬಂದು ಆಕೆಯನ್ನು ಟ್ಯೂಷನ್ಗೆ ಲಿಫ್ಟ್ ನೀಡುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ.
ಇನ್ನು, ಅತ್ಯಾಚಾರದ ವಿಡಿಯೋವನ್ನು ಮೊಬೈಲ್ನಲ್ಲಿ ಸೆರೆ ಹಿಡಿದ ಪುಂಡರು, ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು. ಇದನ್ನು ಗಮನಿಸಿದ ಪೊಲೀಸರು ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದ್ದು, ಈ ವಿಷಯವನ್ನು ಬಾಯ್ಬಿಡದಂತೆ ತನಗೆ ಕೊಲೆ ಬೆದರಿಕೆ ಹಾಕಿದ್ದರು ಎಂದು ಆಕೆ ತಿಳಿಸಿದ್ದಾಳೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಮೊಹಾನಿಯ ಪೊಲೀಸರು, ಆರೋಪಿಗಳನ್ನು ಹೆಡೆಮುರಿ ಕಟ್ಟಲು ಮುಂದಾಗಿದ್ದಾರೆ.