ETV Bharat / bharat

ರಕ್ಷಾ ಬಂಧನ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ - ಉತ್ತರ ಪ್ರದೇಶದ ಮುಖ್ಯಮಂತ್ರಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಲ್ಲಾ ವರ್ಗದ ಬಸ್‌ಗಳಲ್ಲಿ ರಕ್ಷಾ ಬಂಧನದಂದು ಮಹಿಳೆಯರಿಗೆ ಉಚಿತ ಸಾರಿಗೆ ಸೌಲಭ್ಯ ನೀಡುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 2 ರ ಮಧ್ಯರಾತ್ರಿಯಿಂದ ಆಗಸ್ಟ್ 3 ರ ಮಧ್ಯರಾತ್ರಿಯವರೆಗೆ 24 ಗಂಟೆಗಳ ಕಾಲ ಉಚಿತ ಸಾರಿಗೆ ಸೇವೆ ಲಭ್ಯವಿರಲಿದೆ.

Chief Minister Yogi Adityanath
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
author img

By

Published : Aug 2, 2020, 8:04 AM IST

ಲಕ್ನೋ: ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಉತ್ತರ ಪ್ರದೇಶ ರಾಜ್ಯ ರಸ್ತೆ ಸಾರಿಗೆ ನಿಗಮ (ಯುಪಿಎಸ್‌ಆರ್‌ಟಿಸಿ) ತನ್ನ ಎಲ್ಲಾ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶನಿವಾರ ಘೋಷಿಸಿರುವ ಈ ವಿಷಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆಗಸ್ಟ್ 2 ರ ಮಧ್ಯರಾತ್ರಿಯಿಂದ ಆಗಸ್ಟ್ 3 ರ ಮಧ್ಯರಾತ್ರಿಯವರೆಗೆ ಅನ್ವಯಿಸುತ್ತದೆ ಎಂದು ತಿಳಿಸಲಾಗಿದೆ.

ಅಧಿಕೃತ ಪ್ರಕಟಣೆಯ ಪ್ರಕಾರ, ಹಬ್ಬದ ದೃಷ್ಟಿಯಿಂದ, ರಾಖಿ ಮಾರಾಟಗಾರರು ಮತ್ತು ಸಿಹಿ ತಿಂಡಿಗಳ ಅಂಗಡಿಗಳು ಭಾನುವಾರ ತೆರೆದಿರುತ್ತವೆ. ಹಾಗಾಗಿ ಈ ಸಂದರ್ಭದಲ್ಲಿ ತೀವ್ರ ಗಸ್ತು ತಿರುಗಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ರಕ್ಷಾ ಬಂಧನ ಆಚರಣೆಯಲ್ಲಿ ಸಾಮಾಜಿಕ ಅಂತರದ ಮಾನದಂಡಗಳು ಒಳಗೊಂಡಂತೆ ಕೋವಿಡ್​ -19 ರ ನಿಯಮಗಳು ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಆದಿತ್ಯನಾಥ್​ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಈ ವರ್ಷ ದೇಶಾದ್ಯಂತ ಆಗಸ್ಟ್ 3(ನಾಳೆ) ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.