ತೆಲಂಗಾಣ: ರಾಜ್ಯದಲ್ಲಿ ಕೊರೊನಾ ವೈರಸ್ ಹೊಸ ಪ್ರಕರಣವೊಂದು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ವೈರಸ್ ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ವಿಶೇಷ ನಿಗಾ ವಹಿಸಿದೆ.
ಈಗಾಗಲೇ ನಾಲ್ಕು ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇನ್ನು 22 ಮಂದಿಯ ರಕ್ತದ ಮಾದರಿ ಫಲಿತಾಂಶಕ್ಕಾಗಿ ನಿರೀಕ್ಷಿಸಲಾಗುತ್ತಿದೆ.
ಇಂಡೋನೇಷ್ಯಾದಿಂದ ಬಂದ 10 ಜನರು ಸೇರಿದಂತೆ ಮೂವರು ಸ್ಥಳೀಯ ನಿವಾಸಿಗಳನ್ನು ಹೈದರಾಬಾದ್‌ನ ಸರ್ಕಾರಿ ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೆರೆ ರಾಜ್ಯ ಮಹಾರಾಷ್ಟ್ರದಿಂದ ರಸ್ತೆ ಮೂಲಕ ತೆಲಂಗಾಣಕ್ಕೆ ಬರುವ ಜನರನ್ನು ಪರೀಕ್ಷಿಸಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಇ.ರಾಜೇಂದರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕುರಿತಂತೆ ರಾಜೇಂದರ್ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರನ್ನು ಭೇಟಿ ಮಾಡಿ ವೈರಸ್ ಹರಡುವುದನ್ನು ಪರಿಶೀಲಿಸಲು ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳನ್ನು ವಿವರಿಸಿದ್ದಾರೆ.