ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೆರಿ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗಾಯಗೊಂಡ ಸೈನಿಕನನ್ನು ಚಿಕಿತ್ಸೆಗಾಗಿ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ನಿನ್ನೆ ತಡರಾತ್ರಿಯವರೆಗೂ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿ, ಕತ್ತಲೆ ಆವರಿಸಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.