ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಾಕ್‌ಡೌನ್‌ನಿಂದ ಮೊಟಾರು ವಾಹನಗಳ ದಾಖಲೆ ಸಲ್ಲಿಕೆಯ ಅವಧಿಯನ್ನು ಸೆಪ್ಟೆಂಬರ್‌ಗೆ ಮುಂದೂಡಿರುವುದಾಗಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ಆದೇಶವನ್ನು ಪಾಲಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (ಆರ್‌ಟಿಎಚ್) ಸೂಚನೆ ನೀಡಿದೆ. ಲಾಕ್‌ಡೌನ್‌ನಿಂದಾಗಿ ವಾಹನಗಳ ಪರವಾನಿಗೆ ನವೀಕರಣ ಸೇರಿದಂತೆ ದಾಖಲೆಗಳ ಸಲ್ಲಿಕೆಯನ್ನು ಸ್ಥಗಿತಗೊಳಿಸಲಾಗಿತ್ತು.