ETV Bharat / bharat

ಕೊರೊನಾ ತಂದಿಟ್ಟ ಸಂಕಷ್ಟ: ಈ ವರ್ಷದ ಪವಿತ್ರ ಅಮರನಾಥ ಯಾತ್ರೆ ರದ್ದು

ಕೊರೊನಾ ಹಾವಳಿ ಜೋರಾಗಿರುವ ಕಾರಣ ಪ್ರಸಕ್ತ ಸಾಲಿನ ಪ್ರಸಿದ್ಧ ಅಮರನಾಥ ಯಾತ್ರೆಯನ್ನು ಜಮ್ಮು ಕಾಶ್ಮೀರ ಸರ್ಕಾರ ಹಾಗೂ ಅಮರನಾಥ ಯಾತ್ರಾ ಮಂಡಳಿ ರದ್ದುಗೊಳಿಸಿದೆ.

Amarnath yatra
Amarnath yatra
author img

By

Published : Jul 21, 2020, 7:42 PM IST

ಶ್ರೀನಗರ: ಕೋವಿಡ್‌ ಮುನ್ನೆಚ್ಚರಿಕಾ ಕ್ರಮವಾಗಿ ಈ ವರ್ಷದ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಲಾಗಿದೆ.

ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಅಮರನಾಥ​ ದೇವಾಲಯಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಆದರೆ ಅನೇಕ ಜನರು ಒಂದೆಡೆ ಸೇರುವುದರಿಂದ ಸೋಂಕು ಹಬ್ಬುವ ಸಾಧ್ಯತೆಯಿದ್ದು ಈ ನಿರ್ಧಾರ ಕೈಗೊಳ್ಳಲಾಗಿದೆ.

ಜಮ್ಮು ಕಾಶ್ಮೀರ ಹಾಗೂ ಅಮರನಾಥ ಯಾತ್ರಾ ಮಂಡಳಿ ಈ ನಿರ್ಧಾರ ಕೈಗೊಂಡಿದ್ದು, ಕೋವಿಡ್​ ಉಲ್ಬಣಗೊಳ್ಳುತ್ತಿರುವ ಸಂದರ್ಭದಲ್ಲಿ ಯಾತ್ರೆಗೆ ಅವಕಾಶ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.